Latest

ನೂತನ ಸಂಸತ್ ಭವನ ಕಟ್ಟಡಕ್ಕೆ ಶಿಲನ್ಯಾಸ ನೆರವೇರಿಸಿದ ಪ್ರಧಾನಿ ಮೋದಿ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ನೂತನ ಸಂಸತ್ ಭವನ ನಿರ್ಮಾಣ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ನೂತನ ಕಟ್ಟಡಕ್ಕೆ ಶಿಲನ್ಯಾಸ ನೆರವೇರಿಸಿದರು.

ಶೃಂಗೇರಿ ಮಠದ ಅರ್ಚಕರು ನೂತನ ಕಟ್ಟಡದ ಶಿಲನ್ಯಾಸ ಕಾರ್ಯಕ್ರಮಕ್ಕೆ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಶೃಂಗೇರಿ ಅರ್ಚಕರಾದ ಶಿವಕುಮಾರ್ ಶರ್ಮಾ, ಲಕ್ಷ್ಮೀ ನಾರಾಯಣ ಸೋಮಯಾಜಿ, ಗಣೇಶ ಸೋಮಯಾಜಿ, ನಾಗರಾಜ್ ಅಡಿಗರು ಶಿಲನ್ಯಾಸದ ಪೂಜಾ ಕೈಂಕರ್ಯ ನೆರವೇರಿಸಿದರು.

Home add -Advt

ಪ್ರಧಾನಿ ಮೋದಿ ನೂತನ ಕಟ್ಟಡದ ಭೂಮಿ ಪೂಜೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಜ್ಯಸಭೆ ಉಪಸಭಾಪತಿ ಹರಿವಂಶ್ ನಾರಾಯಣ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related Articles

Back to top button