
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಸಂಸದ, ಮಾಜಿ ಸಚಿವ ಡಾ.ಕೆ.ಸುಧಾಕರ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಚಾಲಕ ಬಾಬು ಎಂಬುವವರು ಸಂಸದ ಸುಧಾಕರ್ ಹಾಗೂ ಬೆಂಬಲಿಗರ ಹೆಸರನ್ನು ಡೆತ್ ನೋಟ್ ನಲ್ಲಿ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ್ದಾಗಿ ಆರೋಪಿಸಿದ್ದರು. ಇದೀಗ ಈ ಪ್ರಕರಣ ಸಂಬಂಧ ಬಾಬು ಪತ್ನಿ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಅಟ್ರಾಸಿಟಿ ಕಾಯ್ದೆ ಅಡಿ ಎಫ್ಐಆರ್ ದಾಖಲಾಗಿದೆ.
ಸಂಸದ ಡಾ.ಸುಧಾಕರ್, ನಾಗೇಶ್ ಹಾಗೂ ಮಂಜುನಾಥ್ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಎಫ್ಐಆರ್ ನಲ್ಲಿ ಸುಧಾಕರ್ ಅವರನ್ನು ಎ1 ಎಂದು ಉಲ್ಲೇಖಿಸಲಾಗಿದೆ.