Kannada NewsKarnataka NewsLatestLife StylePolitics

*ಫೆಮಿನಾ ಮಿಸ್ ಇಂಡಿಯಾ ಕಿರೀಟ ತನ್ನದಾಗಿಸಿಕೊಂಡ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಪುತ್ರಿ*

ಪ್ರಗತಿವಾಹಿನಿ ಸುದ್ದಿ: ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರ ಪುತ್ರಿ ಸಾಧ್ವಿ ಸೈಲ್ 61ನೇ ಫೆಮಿನಾ ಮಿಸ್ ಇಂಡಿಯಾ ಕಿರೀಟ ಗೆದ್ದು, ಮಿಂಚಿದ್ದಾರೆ. ಸಾದ್ವಿ ಸೈಲ್ ಗೋವಾ ಪ್ರತಿನಿಧಿಸಿ 29 ಸ್ಪರ್ಧಿಗಳನ್ನು ಹಿಂದಿಕ್ಕಿ ಜಯ ಗಳಿಸಿದ್ದಾರೆ.

ಸಾದ್ವಿ ಸೈಲ್ 2026ರ ಮಿಸ್ ವರ್ಲ್ಡ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಕೆನಡಾದ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರ ಪದವೀಧರೆಯಾಗಿರುವ ಸಾಧ್ವಿ, ಛಾಯಾಗ್ರಹಣ, ಬ್ಯಾಡ್ಮಿಂಟನ್ ಮತ್ತು ಜೇನುಸಾಕಣೆ ಸೇರಿದಂತೆ ವಿವಿಧ ಹವ್ಯಾಸಗಳನ್ನು ಹೊಂದಿದ್ದಾರೆ.

ವಿವಿಧ ರಾಜ್ಯಗಳ ಒಟ್ಟೂ 29 ಮಂದಿ ಸ್ಪರ್ಧಿಗಳನ್ನು ಹಿಂದಿಕ್ಕಿ ಗೋವಾ ಪ್ರತಿನಿಧಿಸಿದ್ದ ಸಾಧ್ವಿ ಫೆಮಿನಾ ಮಿಸ್ ಇಂಡಿಯಾ ಮುಡಿಗೇರಿಸಿಕೊಂಡಿದ್ದಾರೆ. ಮಹಾರಾಷ್ಟ್ರದ ರಾಜನಂದಿನಿ ಅವರು ಮೊದಲ ರನ್ನರ್ ಅಪ್ ಆದರೆ, ಜಮ್ಮು ಹಾಗೂ ಕಾಶ್ಮೀರದ ಶ್ರೀತಿ ಅದ್ವೈತಾ ಅವರು ಎರಡನೇ ರನ್ನರ್ ಅಪ್ ಆಗಿದ್ದಾರೆ. ಕಳೆದ ವರ್ಷದ ವಿನ್ನರ್ ನಿಕಿತಾ ಪೋರ್ವಾಲ್ ಅವರು ಸಾಧ್ವಿಗೆ ಕಿರೀಟ ತೊಡಿಸಿದರು. ಕರ್ನಾಟಕವನ್ನು ಪ್ರತಿನಿಧಿಸಿದ್ದ ಖುಷಿ ರಮೇಶ್‌ ಅವರು ಟಾಪ್ 15ರಲ್ಲಿ ಸ್ಥಾನ ಪಡೆದಿದ್ದಾರೆ.

ಈ ವೇಳೆ ಮಾತನಾಡಿದ ಸಾದ್ವಿ, ನನಗೆ ಈ ಅವಕಾಶ ಸಿಕ್ಕಿದ್ದಕ್ಕೆ ನಾನು ತುಂಬಾ ಕೃತಜ್ಞಳಾಗಿದ್ದೇನೆ. ಇಲ್ಲಿ ಬಂದ ಪ್ರತಿಯೊಬ್ಬರೂ ವಿಜೇತರು. ಭಾರತವನ್ನು ಹೆಮ್ಮೆ ಪಡುವಂತೆ ಮಾಡುವುದು ನನ್ನ ಉದ್ದೇಶ’ ಎಂದು ತಿಳಿಸಿದ್ದಾರೆ.

ಸಾಧ್ವಿ ಅವರು 2026ರ ಮಿಸ್‌ ವರ್ಲ್ಡ್‌ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ವಿಯಟ್ನಾಂನಲ್ಲಿ ಈ ಸ್ಪರ್ಧೆ ಸೆಪ್ಟೆಂಬರ್ 5ರಂದು ನಡೆಯಲಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button