Latest

ವೆಂಟಿಲೇಟರ್ ಸಿಗದೇ ಮೂವರು ಸೊಂಕಿತರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಗದಗ: ಗದಗ ಜಿಲ್ಲೆಯ ಮುಂಡರಗಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಬೆಡ್ ಸಿಗದೇ ಮೂವರು ಕೊರೊನಾ ಸೋಂಕಿತರು ಮೃತಪಟ್ಟಿರುವ ಘಟನೆ ನಡೆದಿದೆ.

ಜಿಲ್ಲೆಯಲ್ಲಿ ವೆಂಟಿಲೇಟರ್ ಬೆಡ್ ಗಾಗಿ ಸೋಂಕಿತರು ಪರದಾಡುತ್ತಿದ್ದು, ನಿನ್ನೆ ಮುಂಡರಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ವೆಂಟಿಲೆಟರ್ ಬೆಡ್ ಸಿಗದೇ ರಾತ್ರಿ ವೇಳೆಗೆ ಆಸ್ಪತ್ರೆಯಲ್ಲಿಯೇ ಪ್ರಾಣಬಿಟ್ಟಿದ್ದರು. ಇದೀಗ ಇಂದು ಬೆಳಿಗ್ಗೆ ಮತ್ತಿಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ.

ಈ ನಡುವೆ ಆಸ್ಪತ್ರೆಯಲ್ಲಿ ಇನ್ನಿಬ್ಬರು ಕೊರೊನಾ ಸೋಂಕಿತರು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.
ಮಾಜಿ ಶಾಸಕ ಮನೋಹರ ಕಟ್ಟಿಮನಿ ಕೊರೊನಾಗೆ ಬಲಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button