Election NewsLatestNationalPolitics

*ಡಿಎಂಕೆ-ಕಾಂಗ್ರೆಸ್‌ ಮೈತ್ರಿಕೂಟ ಬೆಂಬಲಿಸಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ*

ಕೊಯಮತ್ತೂರು ಪ್ಲೆಸ್‌ಕ್ಲಬ್‌ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಸಚಿವರು ಭಾಗಿ

ಪ್ರಗತಿವಾಹಿನಿ ಸುದ್ದಿ: ಕೊಯಮತ್ತೂರು: ತಮಿಳುನಾಡು ಜನತೆ ಮತದಾನ ಮಾಡುವುದಕ್ಕೂ ಮುನ್ನ ಯೋಚಿಸಿ ಮತದಾನ ಮಾಡಿ. ಇಂಡಿಯಾ ಒಕ್ಕೂಟಕ್ಕೆ ಬೆಂಬಲಿಸುವ ಮೂಲಕ ಎನ್‌ಡಿಎ ಸರ್ಕಾರ ರಚಿಸದಂತೆ ನೋಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಮನವಿ ಮಾಡಿದರು.

ಕೊಯಮತ್ತೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಸಚಿವರು, ಮಹಾತ್ಮಗಾಂಧಿ ತತ್ವಗಳನ್ನು ಆದರ್ಶವಾಗಿಟ್ಟುಕೊಂಡು ಕಾಂಗ್ರೆಸ್‌ ಪಕ್ಷ ಕೆಲಸ ಮಾಡುತ್ತಿದ್ದರೆ, ಬಿಜೆಪಿಗರು ಬ್ರಿಟಿಷ್‌ ಸಂಸ್ಕೃತಿಯನ್ನು ಅನುಸರಿಸುತ್ತಿದ್ದಾರೆ ಎಂದರು.

ಜಾತಿ, ಧರ್ಮದ ಹೆಸರಿನಲ್ಲಿ ಬಿಜೆಪಿ ಸಮಾಜವನ್ನು ಒಡೆಯುತ್ತಿದ್ದರೆ, ಡಿಎಂಕೆ ಮುಖ್ಯಸ್ಥ ಸ್ಟಾಲಿನ್‌, ಕಾಂಗ್ರೆಸ್‌ ನೇತಾರರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್‌ ಗಾಂಧಿ ಸಾರಥ್ಯದ ಇಂಡಿಯಾ ಒಕ್ಕೂಟ ಮತ್ತೊಮ್ಮೆ ತಮಿಳುನಾಡಿನಲ್ಲಿ ಸರ್ಕಾರ ರಚಿಸಲಿದೆ. ಮತದಾನ ಮಾಡುವುದಕ್ಕೂ ಮುನ್ನ ಮತದಾರರು ಸೂಕ್ಷ್ಮವಾಗಿ ಯೋಚಿಸಿ ಮತದಾನ ಮಾಡಬೇಕು ಎಂದು ಸಚಿವರು ಹೇಳಿದರು.

ಈ ವೇಳೆ ಗೋವಿಂದರಾಜನಗರ ಕ್ಷೇತ್ರದ ಶಾಸಕ ಪ್ರಿಯಾ ಕೃಷ್ಣ, ಕೊಯಮತ್ತೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ವಿಜಯ್ ಕುಮಾರ್, ಕೊಯಮತ್ತೂರು ಉತ್ತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಆರ್.ರಂಗರಾಜನ್, ಸಿಂಗಾನಲ್ಲೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿಧಿ, ಕಣ್ಣನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button