Uncategorized

*ಶಾಸಕ ಯತ್ನಾಳ್, ರೇಣುಕಾಚಾರ್ಯಗೆ ಬಿಜೆಪಿಯಿಂದ ನೋಟೀಸ್ ಜಾರಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ಕೆಲ ನಾಯಕರು ಬಹಿರಂಗವಾಗಿ ಪಕ್ಷದ ವಿರುದ್ಧ ಹೇಳಿಕೆಗಳನ್ನು ನೀಡಿತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಶಿಸ್ತು ಪಾಲನಾ ಸಮಿತಿ ನೋಟೀಸ್ ಜಾರಿ ಮಾಡಿದೆ.

ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಕೆಲ ಮುಖಂಡರಿಗೆ ಬಹಿರಂಗ ಹೇಳಿಕೆ ನೀಡದಂತೆ ನೋಟೀಸ್ ಜಾರಿ ಮಾಡಲಾಗಿದೆ.

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಬಗ್ಗೆ ಶಾಸಕ ಯತ್ನಾಳ್, ರೇಣುಕಾಚಾರ್ಯ ಸೇರಿದಂತೆ ಕೆಲ ನಾಯಕರು ಸ್ವಪಕ್ಷದ ನಾಯಕರ ವಿರುದ್ಧವೇ ಗರಂ ಆಗಿದ್ದು, ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದರು. ಈ ಹಿನ್ನೆಲೆಯಲ್ಲಿ ನೋಟೀಸ್ ನೀಡಲಾಗಿದೆ.


Related Articles

Back to top button