Belagavi NewsBelgaum NewsKannada NewsKarnataka News

*ಇಂದಿನ ಹವಾಮಾನ ವರದಿ: ಹಲವೆಡೆ ಬಿಳಲಿದೆ ಹಗುರವಾದ ಮಳೆ*

ಪ್ರಗತಿವಾಹಿನಿ ಸುದ್ದಿ: ಇಂದು (ಅ.27) ರಾಜ್ಯದಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ಹಾಗೂ ಮೈಸೂರಿನಲ್ಲಿ ಹಗಲಿನ ವೇಳೆಯಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು ಸಂಜೆ ಅಥವಾ ರಾತ್ರಿ ವೇಳೆಗೆ ತುಂತುರು ಮಳೆಯಾಗುವ ಮುನ್ಸೂಚನೆಯಿದೆ. 

ಕರಾವಳಿ ಜಿಲ್ಲೆಗಳಾದ ಮಂಗಳೂರು ಮತ್ತು ಉಡುಪಿಯಲ್ಲಿ ಮೋಡಕವಿದ ವಾತಾವರಣ ಮುಂದುವರಿಯಲಿದ್ದು ಗಾಳಿ ಸಹಿತ ಸಾಧಾರಣದಿಂದ ಭಾರಿ ಮಳೆಯಾಗಲಿದೆ. ಕರಾವಳಿಯಲ್ಲಿ ಆದ್ರ್ರತೆ ಶೇಕಡಾ 80ಕ್ಕೂ ಹೆಚ್ಚಿರಲಿದ್ದು ಸಮುದ್ರದಲ್ಲಿ ಗಾಳಿಯ ರಭಸ ಹೆಚ್ಚಾಗಿರುವ ಕಾರಣ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಜಾಗರೂಕತೆ ವಹಿಸಲು ಸೂಚಿಸಲಾಗಿದೆ. ಮತ್ತೊಂದೆಡೆ ಮಲೆನಾಡು ಭಾಗಗಳಾದ ಚಿಕ್ಕಮಗಳೂರು, ಹಾಸನ ಮತ್ತು ಕೊಡಗಿನಲ್ಲಿ ಮುಂಗಾರು ಸಕ್ರಿಯವಾಗಿದ್ದು, ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ. ಪಶ್ಚಿಮ ದಿಕ್ಕಿನಿಂದ ಗಂಟೆಗೆ ಸುಮಾರು 18 ಮೈಲಿ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು ಗಾಳಿಯಲ್ಲಿ ತೇವಾಂಶದ ಪ್ರಮಾಣ ಶೇಕಡಾ 69ರಷ್ಟಿರಲಿದೆ.

Related Articles

Back to top button