Karnataka News

*ಮಳೆ ಅವಾಂತರ: ಜಿಲ್ಲಾ ಕೇಂದ್ರ ಮತ್ತು ತಾಲೂಕು ಕೇಂದ್ರಗಳಲ್ಲಿ ಸಹಾಯವಾಣಿ ಆರಂಭ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆ ಅಬ್ಬರ ಜೋರಾಗಿದೆ.‌ ಈಗಾಗಲೇ ಹಲವು ಕಡೆ ಅವಾಂತರಗಳು ಸೃಷ್ಟಿಯಾಗಿವೆ.

ಆದ್ದರಿಂದ ಜಿಲ್ಲಾ ಕೇಂದ್ರ ಮತ್ತು ತಾಲೂಕು ಕೇಂದ್ರಗಳಲ್ಲಿ ಧಾರವಾಡ ಜಿಲ್ಲಾಡಳಿತದ ವತಿಯಿಂದ ತುರ್ತು ಸಹಾಯವಾಣಿ ಆರಂಭಿಸಲಾಗಿದೆ.

ಅತಿವೃಷ್ಟಿ ಹಾಗೂ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಜನರ ಅನುಕೂಲವಾಗಲಿ ಎಂದು ಸಹಾಯವಾಣಿ ಆರಂಭಿಸಲಾಗಿದ್ದು, ಧಾರವಾಡದ ಎಲ್ಲ ತಾಲೂಕಾ ಕೇಂದ್ರ ಸೇರಿ ಜಿಲ್ಲಾಧಿಕಾರಿ ಕಚೇರಿಯಲ್ಲೂ ಸಹಾಯವಾಣಿ ಇರಲಿದೆ.

ಅಷ್ಟೇ ಅಲ್ಲ ಮಹಾನಗರ ಪಾಲಿಕೆಯಲ್ಲಿ ವ್ಯಾಪ್ತಿಯಲ್ಲಿಯೂ ಸಹಾಯವಾಣಿ ಆರಂಭಿಸಲಾಗಿದೆ.

ಮಳೆಯಿಂದ ಹಾನಿಗೊಳಗಾದ ಜನರ ಅನುಕೂಲಕ್ಕಾಗಿ ಆರಂಭಿಸಿದ ಸಹಾಯವಾಣಿ ಕೇಂದ್ರವನ್ನು ಧಾರವಾಡ ಡಿಸಿ ದಿವ್ಯ ಪ್ರಭು ಪರಿಶೀಲಿಸಿದರು.

ದಿನದ 24 ಗಂಟೆಯೂ ಸಹಾಯವಾಣಿ ಕೇಂದ್ರ ಕಾರ್ಯ

ಮಹಾನಗರ ಪಾಲಿಕೆಯ ಸಹಾಯವಾಣಿ – 0836-2213888, 0836-2213889, 0836-2213869

ಜಿಲ್ಲಾಧಿಕಾರಿಗಳ ಕಚೇರಿ ಸಹಾಯವಾಣಿ-0836- 2445508/ಟೋಲ್ ಫ್ರೀ ನಂ.1077

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button