Belagavi NewsBelgaum NewsKarnataka NewsPolitics

*ವಿಠ್ಠಲ -ರುಕ್ಮಿಣಿ ದೇವಸ್ಥಾನ ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೂಮಿ ಪೂಜೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಿಣಿಯೆ ಗ್ರಾಮದಲ್ಲಿ ಶ್ರೀ ವಿಠ್ಠಲ ರುಕ್ಮಿಣಿ ದೇವಸ್ಥಾನದ ನೂತನ ಕಟ್ಟಡದ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾನುವಾರ ಭೂಮಿ ಪೂಜೆ ನೆರವೇರಿಸಿದರು.

ಸುಮಾರು 60 ಲಕ್ಷ ರೂ.ಗಳ ವೆಚ್ಚದಲ್ಲಿ ಈ ದೇವಸ್ಥಾನ ನಿರ್ಮಾಣವಾಗಲಿದೆ. ಗ್ರಾಮಸ್ಥರ ಬೇಡಿಕೆಯಂತೆ ವಿಶೇಷ ಪ್ರಯತ್ನ ಮಾಡಿ ಅನುದಾನ ಮಂಜೂರು ಮಾಡಿಸಲಾಗಿದೆ. ಈಗಾಗಲೆ ಕ್ಷೇತ್ರದಲ್ಲಿ 140ಕ್ಕೂ ಹೆಚ್ಚು ದೇವಸ್ಥಾನಗಳನ್ನು ಜೀರ್ಣೋದ್ಧಾರಗೊಳಿಸಲಾಗಿದೆ. ಕ್ಷೇತ್ರದಲ್ಲಿ ಓಡಾಡುವಾಗ ಯಾವುದೇ ಭಾಗಕ್ಕೆ ಹೋದರೂ ನೂತನ ದೇವಾಲಯಗಳನ್ನು ಕಣ್ತುಂಬಿಕೊಳ್ಳಲು ಸಂತೋಷವೆನಿಸುತ್ತಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಈ ಸಂದರ್ಭದಲ್ಲಿ ಹೇಳಿದರು.

ಈ ವೇಳೆ ಯುವರಾಜ ಕದಂ, ಮೃಣಾಲ್‌ ಹೆಬ್ಬಾಳಕರ್, ಸುರೇಶ ಡುಕರೆ, ಮಾರುತಿ ಡುಕರೆ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹೇಮಂತ ಪಾಟೀಲ, ಡಾ.ಕೃಷ್ಣ ಪಾಟೀಲ, ಸುಭಾಷ್ ಡುಕರೆ, ರಾಮನಿಂಗ ದಳವಿ, ಮಹಾವೀರ ಕಿಣಗಿ, ವರ್ಷಾ ಡುಕರೆ, ನಿವೃತ್ತಿ ಡುಕರೆ, ಸಂತೋಷ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button