*ಪ್ರವಾಸಕ್ಕೆ ತೆರಳಿದ್ದಾಗ ಭೀಕರ ಅಪಘಾತ: ಬೆನ್ನು ಮೂಳೆ ಮುರಿದುಕೊಂಡ ಖ್ಯಾತ ನಟಿ*

ಪ್ರಗತಿವಾಹಿನಿ ಸುದ್ದಿ: ಬಾಲಿ ಪ್ರವಾಸಕ್ಕೆ ಹೋಗಿದ್ದಾಗ ಭೀಕರ ಅಪಘಾತ ಸಾಂಭವಿಸಿ ಬಾಅಲಿವುಡ್ ಖ್ಯಾತ ನಟಿ ನುಸ್ರತ್ ಭರುಚಾ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ನುಸ್ರತ್ ಬಾಲಿ ಪ್ರವಾಸಕ್ಕೆ ಹೋಗಿದ್ದರು. ಈ ವೇಳೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಅವರ ಬೆನ್ನುಮೂಳೆ ಮುರಿದಿದೆ. ಸದ್ಯ ನುಸ್ರತ್ ಬಾಲಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಬಗ್ಗೆ ಸಿನಿಮಾ ತಂಡದ ಪ್ರಚಾರಕಿ ಸಂಚಿತಾ ತ್ರಿವೇದಿ ಮಾಹಿತಿ ನೀಡಿದ್ದು, ಹೆಚ್ಚಿನ ವೈದ್ಯಕೀಯ ಪರೀಕ್ಷೆಗಳ ಬಳಿಕ ನುಸ್ರತ್ ಅವರ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆ ನಡೆಸಲು ವೈದ್ಯರು ನಿರ್ಧರಿಸಿದ್ದಾರೆ ಚಿಕಿತ್ಸೆಗಾಗಿ ಅವರನ್ನು ಬಾಲಿಯಿಂದ ಮುಂಬೈಗೆ ವಿಮಾನದ ಮೂಲಕ ಕರೆತರಲು ಸಿದ್ಧತೆ ನಡೆಯುತ್ತಿದ್ದು, ಮುಂಬೈಗೆ ಬಂದ ಬಳಿಕ ಶಸ್ತ್ರಚಿಕಿತ್ಸೆ ನಡೆಯಲಿದೆ ಎಂದು ಹೇಳಿದ್ದಾರೆ.
ನುಸ್ರತ್ ಭರುಚಾ ಅವರು ನಟ ಟೈಗರ್ ಶ್ರಾಫ್ ಅಭಿನಯದ ಮುಂದಿನ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣದ ಸಂದರ್ಭದಲ್ಲೇ ಅವರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



