Kannada NewsLatest

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳು ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ನಿಂತಿದ್ದ ಲಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಬೆಳಗಾವಿಯಲ್ಲಿ ಸಂಭವಿಸಿದೆ.

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಚವಾಣ್ ಗಲ್ಲಿಯ ಶ್ರೀನಾಥ್ ದಿಗಂಬರ್ ಪವಾರ್ ಹಾಗೂ ಸದಾಶಿವನಗರದ ರಜಿತ್ ರಂಜನ್ ಡುಮಾವತ್ ಮೃತರು.

ಮೃತ ವಿದ್ಯಾರ್ಥಿಗಳು ಬೆಳಗಾವಿಯ ಲಿಂಗರಾಜ ಕಾಲೇಜಿನ ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿಗಳಾಗಿದ್ದಾರೆ. ಇಬ್ಬರು ಸ್ನೇಹಿತರೊಂದಿಗೆ ಡಾಬಾದಲ್ಲಿ ಊಟ ಮುಗಿಸಿ ಬೆಳಗಾವಿಗೆ ಹಿಂತಿರುಗುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ.
ವಿದ್ಯುತ್ ಚಾಲಿತ ವಾಹನಗಳು ಭವಿಷ್ಯಕ್ಕೆ ಅನಿವಾರ್ಯ; ಇಂಧನ ಸಚಿವ ಸುನೀಲ್ ಕುಮಾರ್

Related Articles

Back to top button