Latest

ಗನ್ ಪಾಯಿಂಟ್ ನಲ್ಲಿ ಬೆದರಿಸಿ ಯುವತಿಯ ಅತ್ಯಾಚಾರ; ಉದ್ಯಮಿ ಅರೆಸ್ಟ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಯುವತಿಗೆ ರಿವಾಲ್ವರ್ ತೋರಿಸಿ ಬೆದರಿಕೆಯೊಡ್ಡಿ ಅತ್ಯಾಚಾರ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಉದ್ಯಮಿ ಅನಿಲ್ ರವಿಶಂಕರ್ ಪ್ರಸಾದ್ ನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ಟೈಲ್ಸ್ ಬ್ಯುಸಿನೆಸ್ ನಡೆಸುತ್ತಿದ್ದ ಬಿಹಾರ ಮೂಲದ ಉದ್ಯಮಿ ಅನಿಲ್ ರವಿಶಂಕರ್ ಪ್ರಸಾದ್, ಯುವತಿಯ ಮೇಲೆ ಅತ್ಯಾಚಾರ ನಡೆಸಿದ್ದಾಗಿ ಪ್ರಕರಣ ದಾಖಲಾಗಿತ್ತು.

Home add -Advt

ಉದ್ಯಮಿ ಅನಿಲ್ ರವಿಶಂಕರ್ ಒಡೆತನದ ಪಿಜಿಯಲ್ಲಿ ವಾಸವಾಗಿದ್ದ ಯುವತಿಗೆ ರಿವಾಲ್ವರ್ ನಿಂದ ಬೆದರಿಕೆಯೊಡ್ದಿ, ಆಕೆಯ ಮೇಲೆ ಅನಿಲ್ ರವಿಶಂಕರ್ ಅತ್ಯಾಚಾರವೆಸಗಿದ್ದ. ಇದೀಗ ಆರೋಪಿ ಅನಿಲ್ ರವಿಶಂಕರ್ ನನ್ನು ಬಂಧಿಸಿರುವ ಪೊಲೀಸರು, ರಿವಾಲ್ವರ್ ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಆರೋಪಿಯನ್ನು ಕೋರ್ಟ್ ಗೆ ಹಾಜರುಪಡಿಸಿ ಮೂರು ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಬಿಜೆಪಿಗೆ ಬಿಸಿ ತುಪ್ಪವಾದ ವಿಜಯೇಂದ್ರ MLC ಸೀಟ್

Related Articles

Back to top button