Kannada NewsKarnataka NewsLatest

ಬೆಳಗಾವಿ ಕಾಂಗ್ರೆಸ್ ಅಭ್ಯರ್ಥಿ ಅಂತಿಮ: ಅಧಿಕೃತ ಘೋಷಣೆಯಷ್ಟೆ ಬಾಕಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೆಸರು ಅಂತಿಮಗೊಳಿಸಲಾಗಿದೆ.

Home add -Advt

ಬೆಂಗಳೂರಿನಲ್ಲಿ ಇಂದು ನಡೆದ ಕಾಂಗ್ರೆಸ್ ಪ್ರಮುಖರ ಸಭೆಯಲ್ಲಿ ಈ ಕುರಿತು ಒಮ್ಮತ ಮೂಡಿಬಂದಿದ್ದು, ಹೈಕಮಾಂಡ್ ಗೆ ಹೆಸರು ಕಳಿಸಲಾಗಿದೆ. ಸೋಮವಾರ ಅಧಿಕೃತವಾಗಿ ಘೋಷಣೆಯಾಗಬಹುದು.

ಏಪ್ರಿಲ್ 17ರಂದು ಚುನಾವಣೆ ನಡೆಯಲಿದ್ದು, ಇದೇ 23ರಿಂದ ನಾಮಪತ್ರ ಸಲ್ಲಿಕೆ ಕಾರ್ಯ ನಡೆಯಲಿದೆ.

ಸತೀಶ್ ಜಾರಕಿಹೊಳಿ ಯಮಕನಮರಡಿ ಕ್ಷೇತ್ರದ ಹಾಲಿ ಶಾಸಕರು. ಸಚಿವರಾಗಿ ಕೂಡ ಅನುಭವ ಹೊಂದಿದ್ದಾರೆ. ಜಿಲ್ಲೆಯಲ್ಲಿ ಸಾಕಷ್ಟು ಪರಿಚಿತರು. ಹಾಗಾಗಿ ಅವರನ್ನು ಕಣಕ್ಕಿಳಿಸಿದರೆ ಕಾಂಗ್ರೆಸ್ಗೆ ಗೆಲ್ಲುವ ಅವಕಾಶ ಹೆಚ್ಚಿದೆ ಎನ್ನುವ ಅಭಿಪ್ರಾಯ ಎಲ್ಲರಿಂದ ಬಂದ ಹಿನ್ನೆಲೆಯಲ್ಲಿ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಗೊತ್ತಾಗಿದೆ.

ಪಕ್ಷದ ರಾಷ್ಟ್ರೀಯ ಮುಖಂಡರು ಅಧಿಕೃತವಾಗಿ ಸತೀಶ್ ಜಾರಕಿಹೊಳಿ ಹೆಸರನ್ನು ಘೋಷಿಸಬೇಕಿದೆ.

ಬೆಳಗಾವಿ ಅಭ್ಯರ್ಥಿ ಆಯ್ಕೆ: 2 ನೇ ಸುತ್ತಿನ ಸಭೆಯಲ್ಲಿ ಸತೀಶ್ ಜಾರಕಿಹೊಳಿ ಹೆಸರು

ಉಪ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

Related Articles

Back to top button