Kannada NewsKarnataka NewsLatest

*ಏಪ್ರಿಲ್ 17ರವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಮನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Home add -Advt

ಇಂದಿನಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮೂರು ದಿನ ಒಣ ಹವೆ ಇರಲಿದೆ. ಆದರೆ ಏಒರಿಲ್ 15ರಿಂದ ಏಪ್ರಿಲ್ 17ವರೆಗೆ ಮಳೆಯಾಗಲಿದೆ.

ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ, ಶಿವಮೊಗ್ಗ ಜಿಲೆಗಳಲ್ಲಿಯೂ ಮಳೆಯಾಗಲಿದೆ.

ಇನ್ನು ಬಾಗಲಕೋಟೆಯಲ್ಲಿ 41 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ 34 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.


Related Articles

Back to top button