Latest

ಸಿಡಿ ಪ್ರಕರಣದ ಕಿಂಗ್ ಪಿನ್ ಬಗ್ಗೆಯೂ ದೂರು ನೀಡುತ್ತೇವೆ: ಬಾಲಚಂದ್ರ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡುವ ಬಗ್ಗೆ ರಮೇಶ್ ಜಾರಕಿಹೊಳಿ ಜೊತೆ ಚರ್ಚಿಸಿದ್ದು, ಮೂವರ ವಿರುದ್ಧ ದೂರು ನೀಡುತ್ತೇವೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಡಿ ಪ್ರಕರಣದ ಕಿಂಗ್ ಪಿನ್ ಗಳ ಬಗ್ಗೆಯೂ ಆದಷ್ಟು ಬೇಗ ದೂರು ನೀಡುತ್ತೇವೆ. ಕಿಂಗ್ ಪಿನ್ ಗಳಿಗೆ ಸಹಕರಿಸಿದವರನ್ನು ವಶಕ್ಕೆ ಪಡೆಯಲಾಗಿದೆ. ಆದರೆ ದೊಡ್ಡ ತಿಮಿಂಗಿಲವನ್ನು ವಶಕ್ಕೆ ಪಡೆದಿಲ್ಲ ಎಂದು ತಿಳಿಸಿದರು.

Home add -Advt

ನಾವು ಗಾಳಿಯಲ್ಲಿ ಗುಂಡು ಹೊಡೆಯುತ್ತಿಲ್ಲ, ಕಾನೂನು ಹೋರಾಟದಿಂದ ಹಿಂದೆ ಸರಿಯುವುದೂ ಇಲ್ಲ. ಆರೋಪಿಗಳಿಗೆ ಬುದ್ಧಿ ಕಲಿಸಬೇಕೆಂದರೆ ಎಲ್ಲರನ್ನೂ ಬಂಧಿಸಬೇಕು. ಸಾಕ್ಷಾಧಾರಗಳನ್ನು ಖಾಸಗಿಯಾಗಿ ಸಂಗ್ರಹ ಮಾಡಲಾಗುತ್ತಿದೆ. ಯುವತಿ ಜೊತೆ ಇರುವ ಫೋಟೋಗಳು ಲಭ್ಯವಾಗಿವೆ. ಪಕ್ಕಾ ಎವಿಡೆನ್ಸ್ ಕಲೆಕ್ಟ್ ಮಾಡಿ ದೂರು ನೀಡುತ್ತೇವೆ ಎಂದು ಹೇಳಿದ್ದಾರೆ.

ರಮೇಶ ಜಾರಕಿಹೊಳಿ ಸಿಡಿ ಪ್ರಕರಣ: ಯುವತಿ ಸಿಗೋವರೆಗೂ ತನಿಖೆ ದಾರಿಗೆ ಬರೋದು ಕಷ್ಟ?

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ಯುವತಿ ಸೇರಿ ನಾಲ್ವರು ಎಸ್ ಐಟಿ ವಶಕ್ಕೆ

Related Articles

Back to top button