Politics

*ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ಜೈಲುವಾಸವೇ ಗತಿ*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ನೀಡಿದೆ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದೆ.

ಅಶ್ಲೀಲ ವಿಡಿಯೋ ಕೇಸ್ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಜಾಮೀನು ಅರ್ಜಿ ತಿರಸ್ಕರಿಸಿ ಆದೇಶ ಹೊರಡಿಸಿತ್ತು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಪ್ರಜ್ವಲ್ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

Home add -Advt

ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣಗೆ ಪರಪ್ಪನ ಅಗ್ರಹಾರ ಜೈಲುವಾಸವೇ ಗತಿಯಾಗಿದೆ.

Related Articles

Back to top button