Kannada NewsLatest

ಬೆಳಗಾವಿ: ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಹೈಕೋರ್ಟ್ ಮಧ್ಯಂತರ ಆದೇಶದ ನಡುವೆಯೂ ಶಾಲಾ-ಕಾಲೆಜುಗಳಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ಸಂಘರ್ಷ ಮುಂದುವರೆದಿದೆ. ಈ ನಡುವೆ ಬೆಳಗಾವಿ ಜಿಲ್ಲೆಯ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದ ಘಟನೆ ನಡೆದಿದೆ.

ಬೆಳಗಾವಿ ವಿಜಯಾ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಹಿಜಾಬ್ ಕುರಿತು ವಿದ್ಯಾರ್ಥಿಗಳ ಕಿರಿಕ್ ಮುಂದುವರೆದಿರುವಾಗಲೇ ಅಥಣಿ ಪಟ್ಟಣದ ಶ್ರೀ ಕೆ.ಎ.ಲೋಕಾಪುರ ಪದವಿ ಕಾಲೇಜು ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದಾರೆ. 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜು ಆವರಣಕ್ಕೆ ಬರುತ್ತಿದ್ದಂತೆ ಕಾಲೇಜು ಸಿಬ್ಬಂದಿಗಳು ತಡೆದಿದ್ದಾರೆ.

Home add -Advt

ವಿಷಯ ತಿಳಿಯುತ್ತಿದ್ದಂತೆ ಅಥಣಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ವಿದ್ಯಾರ್ಥಿಗಳ ಮನವೊಲಿಕೆ ಮಾಡಿದ್ದಾರೆ. ಬಳಿಕ ಕಾಲೇಜು ಆಡಳಿತ ಮಂಡಳಿ ಜತೆ ಸಭೆ ನಡೆಸಿದ್ದಾರೆ.
ಬೆಳಗಾವಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಮುಂದುವರೆದ ಹೈಡ್ರಾಮಾ

Related Articles

Back to top button