Kannada NewsKarnataka NewsPolitics
*ಶಾಸಕರ ಮನೆ ಹಿಂದೆ ಪಾರ್ಕ್ ಆಗಿದ್ದ ವಾಹನಗಳ ಮೇಲೆ ದಾಳಿ*

ಪ್ರಗತಿವಾಹಿನಿ ಸುದ್ದಿ: ಶಾಸಕರ ಮನೆಯ ಹಿಂಭಾಗದ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಕಾರು ಮತ್ತು ಆಟೋಗಳ ಮೇಲೆ ಕಿಡಿಗೇಡಿಗಳು ದಾಳಿ ಮಾಡಿದ್ದಾರೆ. ದಾಳಿಯಲ್ಲಿ 12 ಕಾರುಗಳು 8 ಆಟೋಗಳ ಗಾಜುಗಳು ಪುಡಿ ಪುಡಿಯಾಗಿವೆ.
ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಅವರ ಮನೆ ಹಿಂದೆ ನಿಲ್ಲಿಸಿದ ವಾಹನಗಳ ಕಿಡಿಗೇಡಿಗಳು ದಾಳಿ ಮಾಡಿದ್ದಾರೆ.
ಹೊಂಗಸಂದ್ರದ ರಾಜಕುಮಾರ್ ರಸ್ತೆ ಬದಿ ನಿಲ್ಲಿಸಿದ್ದ 12 ಕಾರುಗಳು 8 ಆಟೋಗಳ ಮೇಲೆ ದುಷ್ಕರ್ಮಿಗಳು ನಸುಕಿನ ಜಾವ 3 ಗಂಟೆ ಸುಮಾರಿಗೆ ಕಲ್ಲು, ದೊಣ್ಣೆ, ರಾಡ್ನಿಂದ ಕಾರು ಆಟೋಗಳ ಮೇಲೆ ದಾಳಿ ಮಾಡಿದ್ದಾರೆ.
ಸದ್ಯ ಘಟನೆ ಸಂಬಂಧ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸಿಸಿ ಕ್ಯಾಮರಾಗಳ ದೃಶ್ಯಗಳನ್ನು ಆಧರಿಸಿ ಪೊಲೀಸರು ಅರುಣ್, ಸಾಗರ್, ಸತೀಶ್ ಮತ್ತು ಮರಿಯಪ್ಪ ಎಂಬ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
ಕುಡಿದ ನಶೆಯಲ್ಲಿ ಕೃತ್ಯ ಎಸಗಿರುವ ಸಾಧ್ಯತೆ ಇದ್ದು, ಪೊಲೀಸರ ತನಿಖೆಯಿಂದ ಸತ್ಯಾಸತ್ಯತೆ ತಿಳಿದುಬರಬೇಕಿದೆ.




