Kannada NewsKarnataka NewsLatest

*ಆಟವಾಡುತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ: ಕಾರ್ಮಿಕ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಆಟವಾಡುತ್ತಿದ್ದ ಬಾಲಕಿಯನ್ನು ಕಟ್ಟಡದ ಮೇಲೆ ಕರೆದೊಯ್ದು ಅತ್ಯಾಚಾರವೆಸಗಿದ ಆರೋಪದಡಿ ಬಿಹಾರ ಮೂಲದ ಕಾರ್ಮಿಕನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮೊಹಮ್ಮದ್ ಮುನ್ನಾ (25) ಬಂಧಿತ ಆರೋಪಿ. 11 ವರ್ಷದ ಅಪ್ರಾಪ್ತೆ ಮೇಲೆ ಆತ್ಯಾಚಾರವೆಸಗಿದ ಆರೋಪದಡಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಲಾಗುತ್ತಿದೆ.

Home add -Advt

ಬಾಲಕಿಯ ಪೋಷಕರು ಕಲಬುರಗಿ ಮೂಲದವರಾಗಿದ್ದು, ಹಲವು ವರ್ಷಗಳಿಂದ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ದಂಪತಿಗಳು ಗಾರೆ ಕೆಲಸ ಮಾಡುತ್ತಿದ್ದಾರೆ. ಬುಧವಾರ ಸಂಜೆ ಮನೆಗೆ ಬಂದಾಗ ಬಾಲಕಿಯ ಕೈಯಲ್ಲಿ 150 ರೂಪಾಯಿ ಇರುವುದನ್ನು ತಾಯಿ ಗಮನಿಸಿ ಪ್ರಶ್ನಿಸಿದಾಗ ಸರಿಯಾಗಿ ಹೇಳಿರಲಿಲ್ಲ. ಬಳಿಕ ಪೋಷಕರು ವಿಚಾರಿಸಿದಾಗ ‘ತಮ್ಮ ಮನೆ ಬಳಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಹುಡುಗ ತನ್ನನ್ನ ಬಿಲ್ಡಿಂಗ್ ಮೇಲೆ ಕರೆದೊಯ್ದು ಅಸಭ್ಯವಾಗಿ ವರ್ತಿಸಿದ್ದಾಗಿ ಬಳಿಕ ಹಣ ನೀಡಿ ಈ ವಿಚಾರವನ್ನು ಯಾರಿಗೂ ಹೇಳಬಾರದೆಂದು ಹೇಳಿ ಕಳುಹಿಸಿದ್ದಾಗಿ ತಿಳಿಸಿದ್ದಾಳೆ. ಎ.7ರಂದು ಸಹ ಇದೇ ರೀತಿ ತನ್ನೊಂದಿಗೆ ವರ್ತಿಸಿದ್ದ ಎಂದು ಬಾಲಕಿ ಹೇಳಿದ್ದಳು.

ಈ ವಿಚಾರ ತಿಳಿದು ಆತಂಕಗೊಂಡ ಪೋಷಕರು, ನಿರ್ಮಾಣ ಹಂತದ ಕಟ್ಟಡದ ಬಳಿ ಹೋಗುತ್ತಿದ್ದಂತೆ ಆರೋಪಿ ಪರಾರಿಯಾಗಲು ಯತ್ನಿಸಿ ಸಿಕ್ಕಿಬಿದ್ದಿದ್ದ. ಘಟನೆ ಕುರಿತಂತೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Related Articles

Back to top button