Kannada NewsKarnataka NewsLatestPolitics

*ಮಾಜಿ ಸಚಿವ ಎಸ್.ಆರ್.ಪಾಟೀಲ್ ಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಿರಿಯ ರಾಜಕಾರಣಿ, ಮಾಜಿ ಸಚಿವ ಎಸ್.ಆರ್.ಪಾಟೀಲ್ ಅವರಿಗೆ 2021ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ ಘೋಷಣೆಯಾಗಿದೆ.

ಜುಲೈ 18ರಂದು ಸಂಜೆ 6 ಗಂಟೆಗೆ ವಿಧಾನಸೌಧದ 3ನೇ ಮಹಡಿಯಲ್ಲಿನ ಸಭಾಂಗಣದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದ್ದು, ಪ್ರಶಸ್ತಿ ಸ್ವೀಕರಿಸಲು ಎಸ್.ಆರ್.ಪಾಟೀಲ್ ಅವರಿಗೆ ವಿಧಾನಪರಿಷತ್ ಕಾರ್ಯದರ್ಶಿ ಮೀನಾ ನಾಯಕ್ ಆಹ್ವಾನಿದ್ದಾರೆ.

Home add -Advt

ಕಳೆದ ನಾಲ್ಕು ದಶಕಗಳಿಂದ ಎಸ್.ಆರ್.ಪಾಟೀಲ್ ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಜವಾಬ್ದಾರಿ ನಿರ್ವಹಿಸಿದ್ದಾರೆ. 24 ವರ್ಷ ಮೇಲ್ಮನೆ ಸದಸ್ಯರಾಗಿ, ವಿರೋಧ ಪಕ್ಷದ ನಾಯಕರಾಗಿ, ಸಭಾ ನಾಯಕರಾಗಿ ಹಾಗೂ ಮೂರು ವರ್ಷ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ.

Related Articles

Back to top button