Kannada NewsKarnataka NewsLatest
ಬೆಳಗಾವಿ: ಅಪಘಾತಕ್ಕೆ ಮಹಿಳೆ ಬಲಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಟ್ರಕ್ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿ, ಮಹಿಳೆಯೊಬ್ಬರು ಸಾವಿಗೀಡಾಗಿದ್ದಾರೆ.
ಬೆಳಗಾವಿಯ ಸಂಗಮೇಶ್ವರ ನಗರದ ಬಳಿ ಶನಿವಾರ ಸಂಜೆ ಬೈಕ್ ಗೆ ಟ್ರಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ನಲ್ಲಿದ್ದ 61 ವರ್ಷದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಮಹಿಳೆ ಬೆಳಗಾವಿಯ ರಾಮದೇವ ಗಲ್ಲಿಯ ನಿವಾಸಿ ಛಾಯಾ ನಾಗಪ್ಪ ಬಿಸೆ.
ನಾಗಪ್ಪ ಬಿಸೆ (68)ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಎಪಿಎಂಸಿ ಠಾಣಿಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.




