Belagavi NewsBelgaum NewsKannada NewsKarnataka NewsLatestPolitics

*ಟ್ರ್ಯಾಕ್ಟರ್ ಅಪಘಾತದಲ್ಲಿ ಮೂವರು ಮಹಿಳೆಯರು ಸಾವು ಪ್ರಕರಣ; ಸರ್ಕಾರದಿಂದ ಪರಿಹಾರ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆ ಕಾಗವಾಡ ಬಳಿ ಸಂಭವಿಸಿದ ಟ್ರ್ಯಾಕ್ಟರ್ ಅಪಘಾತದಲ್ಲಿ ಮೃತಪಟ್ಟ ಮೂವರು ಮಹಿಳೆಯರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ 2 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ.

ಈ ಬಗ್ಗೆ ಸಚಿವ ಶಿವಾನಂದ ಪಾಟೀಲ ಮಾಹಿತಿ ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದು ವಿಶೇಷ ಪ್ರಕರಣ ಎಂದು ಪರಿಗಣಿಸಿ ಪರಿಹಾರ ನೀಡಲು ಮನವಿ ಮಾಡಿದಾಗ ಮುಖ್ಯಮಂತ್ರಿಗಳು ಸಮ್ಮತಿಸಿದ್ದಾರೆ ಎಂದು ತಿಳಿಸಿದರು.

Home add -Advt

ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಸಚಿವರು ಮೃತರಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ
ಟ್ರ್ಯಾಕ್ಟರ್ ಅಪಘಾತ,ಮೂವರು ಮಹಿಳೆಯರು ಸಾವು,2 ಲಕ್ಷ ಪರಿಹಾರ ಘೋಷಣೆ


Related Articles

Back to top button