Kannada NewsKarnataka NewsLatest

*ಶಿಕ್ಷಕಿ ಬೈದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ: ಶಿಕ್ಷಕಿ ಸೇರಿ ಇಬ್ಬರು ವಜಾ*

ಪ್ರಗತಿವಾಹಿನಿ ಸುದ್ದಿ: ಶಿಕ್ಷಕಿ ಬೈದಿದ್ದಕ್ಕೆ 8ನೇ ತರಗತಿಯ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಶಿಕ್ಷಕಿಯರು, ಓರ್ವ ಅಡುಗೆ ಸಹಾಯಕಿ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಮರಸೂರು ಮಡಿವಾಳದಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಮಧುಶ್ರೀ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಎರಡು ದಿನಗಳ ಹಿಂದೆ ನಡೆದಿತ್ತು. ಈ ಪ್ರಕರಣ ಸಂಬಂಧ ಆನೇಕಲ್ ನ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಸುಜಾತ ಈರಪ್ಪ, ಸಹ ಶಿಕ್ಷಕಿಯರಾದ ಕವಿತಾ, ರೂಪಾ ಹಾಗೂ ಅಡುಗೆ ಸಹಾಯಕಿ ಕಮಲಮ್ಮ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

Home add -Advt

ಅಲ್ಲದೇ ಪ್ರಕರಣದಲ್ಲಿ ಓರ್ವ ಶಿಕ್ಷಕಿ ಹಾಗೂ ಅಡುಗೆ ಸಹಾಯಕಿಯನ್ನು ಕೆಲಸದಿಂದ ವಜಾಗೊಳಿಸಿ ಶಾಲಾಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.

Related Articles

Back to top button