LatestNational

*ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ: ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದ ಮೂರು ಬೋಗಿಗಳು*

ಪ್ರಗತಿವಾಹಿನಿ ಸುದ್ದಿ: ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಮೂರು ಬೋಗಿಗಳು ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂ ರೈಲು ನಿಲ್ದಾಣದಲ್ಲಿ ನಡೆದಿದೆ.

ಕೊರ್ಬಾ-ವಿಶಾಖಪಟ್ಟಣಂ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಆಗತಾನೇ ರೈಲು ಪ್ಲಾಟ್ ಫಾರಂ ಗೆ ಬಂದು ನಿಂತಿತ್ತು. ಕೆಲವೇ ಸಮಯದಲ್ಲಿ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

Home add -Advt

ರೈಲಿನ ಬಿ 6, ಬಿ7, ಬಿ8 ಬೋಗಿಗಳು ಧಗಧಗನೇ ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದಿವೆ. ರೈಲಿನಲ್ಲಿದ್ದ ಪ್ರಯಾಣಿಕರು ಇಳಿದು ಹೋಗಿದ್ದರಿಂದ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ. ರೈಲು ನಿಲ್ದಾಣಕ್ಕೆ ಬಂದು ನಿಂತು ಪ್ರಯಾಣಿಕರು ಇಳಿದು ಹೋಗುತ್ತಿದ್ದಂತೆ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ರೈಲು ಸಿಬ್ಬಂದಿಗಳು, ಪ್ರಯಾಣಿಕರು ಪಾರಾಗಿದ್ದಾರೆ.

Related Articles

Back to top button