Politics

*ಭಾರತೀಯ ಸೈನಿಕರ ಶ್ರೇಯಸ್ಸಿಗಾಗಿ ಮಸೀದಿಗಳಲ್ಲಿ ಶುಕ್ರವಾರ ವಿಶೇಷ ಪ್ರಾರ್ಥನೆ: ಸಚಿವ ಜಮೀರ್ ಅಹಮದ್ ಖಾನ್*

ಪ್ರಗತಿವಾಹಿನಿ ಸುದ್ದಿ: ಪಹಲ್ಗಾಮ್ ದಾಳಿಯಲ್ಲಿ ಪಾಕ್ ಉಗ್ರರು 26 ಪ್ರವಾಸಿಗರನ್ನು ಬಲಿಪಡೆದಿದ್ದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ ಉಗ್ರರ ವಿರುದ್ಧ ಹೋರಾಟ ನಡೆಸಿ, ದೇಶ ರಕ್ಷಣೆಯಲ್ಲಿ ತೊಡಗಿದ್ದು, ಭಾರತೀಯ ಸೈನಿಕರ ಪರವಾಗಿ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

Home add -Advt

ವಖ್ಫ್ ಬೋರ್ಡ್ ವ್ಯಾಪ್ತಿಯ ಮಸೀದಿಗಳು ಸೇರಿದಂತೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ದೇಶದ ಹೆಮ್ಮಯ ಸೈನಿಕರ ಶ್ರೇಯಸ್ಸಿ ಗಾಗಿ ಹಾಗೂ ಶಕ್ತಿ ತುಂಬಲು ಶುಕ್ರವಾರದ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

ಈ ಕುರಿತು ವಖ್ಫ್ ಬೋರ್ಡ್ ಮುಖ್ಯ ಕಾರ್ಯನಿರ್ವಹಾಧಿಕಾರಿ ಗೆ ಸಚಿವ ಜಮೀರ್ ಅಹಮದ್ ಖಾನ್ ಅವರು ಪತ್ರ ಬರೆದು ಸೂಚನೆ ನೀಡಿದ್ದಾರೆ.

Related Articles

Back to top button