Kannada NewsKarnataka NewsLatest

*ಹಸೆಮಣೆಯೇರಬೇಕಿದ್ದ ಯುವತಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: 13 ದಿನಗಳಲ್ಲಿ ಹಸೆಮಣೆಯೇರಿ ಮದುವೆಯಾಗಬೇಕಿದ್ದ ಯುವತಿಯೊಬ್ಬಳು ನೇಣಿಗೆ ಕೊರಳೊಡ್ಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕಟ್ಟೆಹಕ್ಲು ಗ್ರಾಮದಲ್ಲಿ ನಡೆದಿದೆ.

26 ವರ್ಷದ ಚೈತ್ರಾ ಆತ್ಮಹತ್ಯೆಗೆ ಶರಣಾದ ಯುವತಿ. ಎಂ.ಕಾಂ ಪದವೀಧರೆಯಾಗಿದ್ದ ಚೈತ್ರಾಳಿಗೆ ಮದುವೆ ನಿಶ್ಚಯವಾಗಿತ್ತು. ಫೆ.4ರಂದು ಚೈತ್ರಾಳ ಮದುವೆಗೆ ಸಿದ್ಧತೆ ನಡೆಸಲಾಗಿತ್ತು.

Home add -Advt

ಈ ಮಧ್ಯೆ ಚೈತ್ರಾ ಕೆಲ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಳು ಎನ್ನಲಾಗಿದೆ. ಈಗ ಮನೆಯಲ್ಲಿ ಯಾರೂ ಇಲ್ಲದ ವೇಳೆ ಯುವತಿ ನೇಣಿಗೆ ಶರಣಾಗಿದ್ದಾಳೆ.

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Related Articles

Back to top button