Karnataka NewsLatest
*ಆಹಾರ ಸಂಗ್ರಹ ಗೋದಾಮಿನಲ್ಲಿ ಭಾರಿ ಬೆಂಕಿ ಅವಘಡ*

ಪ್ರಗತಿವಾಹಿನಿ ಸುದ್ದಿ: ಆಹಾರ ಸಂಗ್ರಹ ಗೋದಾಮಿನಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದೆ. ಇಡೀ ಗೋದಾಮು ಧಗ ಧಗನೆ ಹೊತ್ತಿ ಉರಿದಿದ್ದು, ಮುಗಿಲೆತ್ತರಕ್ಕೆ ಬೆಂಕಿಯ ಜ್ವಾಲೆ ವ್ಯಾಪಿಸಿದೆ.
ಬೆಂಗಳೂರಿನ ನೆಲಮಂಗಲ ತಾಲೂಕಿನ ಅಡಕಮಾರನಹಳ್ಳಿಯಲ್ಲಿನ ಆಹಾರ ಸಂಗ್ರಹ ಗೋದಾಮಿನಲ್ಲಿ ಈ ಘಟನೆ ನಡೆದಿದೆ. ಆಂಜನೇಯ ದೇಗುಲದ ಬಳಿ ಇರುವ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಆಹಾರ ಪದಾರ್ಥಗಳು ಬೆಂಕಿಗೆ ಆಹುತಿಯಾಗಿ ಸಂಪೂರ್ಣ ಸುಟ್ಟು ಭಸ್ಮವಾಗಿವೆ.
ವಿಷಯ ತಿಳಿಯುತ್ತಿದ್ದಂತೆ ನೆಲಮಂಗಲ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ. ರಾತ್ರಿ ಸುಮಾರು 10 ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್ನಿಂದ ಅಗ್ನಿ ದುರಂತ ಸಂಭವಿಸಿರಬಹುದು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.




