Kannada NewsKarnataka NewsLatest
*ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ಹೋಟೆಲ್ ಯುವಕನಿಂದ ಲೈಂಗಿಕ ದೌರ್ಜನ್ಯ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿಗೆ ಹೋಟೆಲ್ ಸಿಬ್ಬಂದಿಯೊಬ್ಬ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಹೆಸರಘಟ್ಟರಸ್ತೆಯ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿಗೆ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ವಿದ್ಯಾರ್ಥಿನಿ ಹೋಟೆಲ್ ಗೆ ಬಿಲ್ ಕೊಡಲು ಹೋದಾಗ ಯುವಕ ಹೋಟೆಲ್ ಬಾಗಿಲು ಮುಚ್ಚಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.
ಯುವಕನ ವಿರುದ್ಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಪಿ ಕಬೀರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.




