Kannada NewsKarnataka NewsLatest

*ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಲಾರಿ ಹಾಗೂ ಜೀಪು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನಲ್ಲಿ ನಡೆದಿದೆ.

ಅಫಜಲಪುರದ ನೀರಾವರಿ ಕಚೇರಿ ಬಳಿ ಈ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಂತೋಷ್ (40), ಶಂಕರ್ (55), ಸಿದ್ದಮ್ಮ(50), ಹುಚ್ಚಪ್ಪ ಮೃತ ದುರ್ದೈವಿಗಳು.

ಸಾವನ್ನಪ್ಪಿದವರೆಲ್ಲರೂ ಅಫಜಲಪುರದ ಮಾಡ್ಯಾಳ ಗ್ರಾಮದ ನಿವಾಸಿಗಳು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳು ಪೂಜಾ ದೊದ್ಡಮನಿ ಎಂಬುವವರಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


Related Articles

Back to top button