Latest

*ಅಂಜಲಿ ಹತ್ಯೆ ಪ್ರಕರಣ; ಆರೋಪಿ ಸಿಐಡಿ ಕಸ್ಟಡಿಗೆ*

ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿಯಲ್ಲಿ ಯುವತಿ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ ನನ್ನು ಸಿಐಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.

ಆರೋಪಿ ವಿಶ್ವ ಅಲಿಯಾಸ್ ಗಿರೀಶ್ ನನ್ನು 15 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡುವಂತೆ ಸಿಐಡಿ ಅಧಿಕಾರಿಗಳು ಕೋರ್ಟ್ ಗೆ ಮನವಿ ಮಡಿದ್ದರು. ಈ ವೇಳೆ ಹುಬ್ಬಳ್ಳಿ 3ನೇ ಹೆಚ್ಚುವರಿ ಮತ್ತು ಜೆ ಎಂ ಎಫ್ ಸಿ ನ್ಯಾಯಾಲಯ ಆರೋಪಿಯನ್ನು 8 ದಿನಗಳ ಕಾಲ ಸಿಐಡಿ ಕಸಡಿಗೆ ವಹಿಸಿ ಆದೇಶ ನೀಡಿದೆ.

ಕೆಲ ದಿನಗಳ ಹಿಂದೆ ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿನ ಮನೆಗೆ ನುಗ್ಗಿದ್ದ ಹಂತಕ ವಿಶ್ವ ಅಲಿಯಾಸ್ ಗಿರೀಶ್, ಯುವತಿ ಅಂಜಲಿಯನ್ನು ಚಾಕುವಿನಿಂದ ಇರಿದು ಕೊಂದು ಪರಾರಿಯಾಗಿದ್ದ. ದಾವಣಗೆರೆ ರೈಲು ನಿಲ್ದಾಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ನೀಡಿತ್ತು.

Related Articles

Back to top button