Kannada NewsKarnataka NewsLatest

*BREAKING: ಕಪ್ಪೆ ಚಿಪ್ಪು ತೆಗೆಯಲು ನದಿಗೆ ಇಳಿದಿದ್ದ 8 ಜನ ಜಲಸಮಾಧಿ*

ಪ್ರಗತಿವಾಹಿನಿ ಸುದ್ದಿ: ಕಪ್ಪೆ ಚಿಪ್ಪು ತೆಗೆಯಲು ನದಿಗೆ ಇಳಿದಿದ್ದ ಒಂದೇ ಕುಟುಂಬದ 8 ಜನ ಜಲಸಮಾಧಿಯಾಗಿರುವ ಘಟನೆ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಟ್ಟೆಹಕ್ಕಲು ನದಿಯಲ್ಲಿ ಈ ದುರಂತ ಸಂಭವಿಸಿದೆ. ಮೃತರು ಭಟ್ಕಳದ ಶಿರಾಲಿ ಮೂಲದವರು. ಕಪ್ಪೆ ಚಿಪ್ಪು ತೆಗೆಯಲು ಒಂದೇ ಕುಟುಂಬದ 14 ಜನರು ತಟ್ಟೆಹಕ್ಕಲು ನದಿಗೆ ಇಳಿದಿದ್ದರು,

ಈ ವೇಳೆ ನದಿ ನೀರಿನಲ್ಲಿ ಇಬ್ಬರು ಮುಳುಗಿದ್ದಾರೆ. ಅವರನ್ನು ರಕ್ಷಿಸಲೆಂದು ಮತ್ತೊಬ್ಬರು ಹೋಗಿದ್ದಾರೆ. ಮೂವರು ನೀರಿನಲ್ಲಿ ಮುಳುಗಿರುವುದನ್ನು ಕಂಡು ಅವರನ್ನು ರಕ್ಷಿಸಲೆಂದು ಇನ್ನೊಬ್ಬರು ಹೀಗೆ ಒಬ್ಬರ ಹಿಂದೆ ಒಬ್ಬರು ಹೋಗಿದ್ದಾರೆ. ಘಟನೆಯಲ್ಲಿ 8 ಜನರು ಮೃತಪಟ್ಟಿದ್ದಾರೆ. ಇಬ್ಬರು ನದಿಯಲ್ಲಿ ನಾಪತ್ತೆಯಾಗಿದ್ದಾರೆ.

ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಘಟನಾ ಸ್ಥಳಕ್ಕೆ ದೌಡಾಯಿಸಿ ನಾಪತ್ತೆಯಾಗಿರುವವರಿಗಾಗಿ ನದಿಯಲ್ಲಿ ಹುಡುಕಾಟ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button