National

*10 ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ*

ಪ್ರಗತಿವಾಹಿನಿ ಸುದ್ದಿ: ಭಾರತ ಹಾಗೂ ಮ್ಯಾನ್ ಮಾರ್ ಗಡಿ ಭಾಗದಲ್ಲಿ ಉದ್ವಿಗ್ನತೆ ತೀವ್ರಗೊಂಡಿದ್ದು, ಬುಧವಾರ ತಡರಾತ್ರಿ ನಡೆದ ಭಯೋತ್ಪಾದಕರ ಹಾಗೂ ಭದ್ರತಾ ಪಡೆಗಳ ಗುಂಡಿನ ಚಕಮಕಿಯಲ್ಲಿ 10 ಉಗ್ರರನ್ನು ಹೊಡೆದುರುಳಿಸಲಾಗಿದೆ.

ಸಮತಾಲ್ ಹಳ್ಳಿಯ ಕೆಂಗ್ಟಾಯ್ ತೆಹಸಿಲ್ ನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಈವರೆಗೂ 10 ಉಗ್ರರನ್ನು ಹೆಡೆ ಮುರಿ ಕಟ್ಟಲಾಗಿದೆ. ಸ್ಥಳದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ಮುಂದುವರೆಸಿವೆ.

ಮೊದಲಿಗೆ ಉಗ್ರರು ಫೈರಿಂಗ್ ನಡೆಸಿದ್ದಾರೆ. ಇದಕ್ಕೆ ಸೇನೆ ಪ್ರತ್ಯುತ್ತರ ಕೊಟ್ಟಿದ್ದು, ಗುಪ್ತಚರ ಮಾಹಿತಿ ಮೇರೆಗೆ ಹೆಚ್ಚಿನ ಭದ್ರತೆ ನಿಯೋಜಿಸಲಾಗಿದೆ. ಸ್ಥಳದಲ್ಲಿ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button