Film & EntertainmentKannada NewsKarnataka News

*108 ಆಂಬುಲೆನ್ಸ್ ನಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ*

ಪ್ರಗತಿವಾಹಿನಿ ಸುದ್ದಿ; ಘಟಪ್ರಭಾ :108 ಆಂಬುಲೆನ್ಸ್ ನಲ್ಲಿಯೇ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಸಮೀಪದ ಸಂಗನಕೇರಿ ಗ್ರಾಮದಲ್ಲಿ ನಡೆದಿದೆ.

ಆಸ್ಪತ್ರೆಗೆಂದು ಕರೆದುಕೊಂಡು ಹೋಗುತ್ತಿದ್ದಾಗ ಹೆರಿಗೆ ನೋವು ಹೆಚ್ಚಾಗಿದ್ದರಿಂದ 108 ಆಂಬುಲೆನ್ಸ್ ಇ ಎಂ ಟಿ ಪರಮಾನಂದ ಅವರು ಆಂಬುಲೆನ್ಸ್ ನಲ್ಲಿಯೇ ಹೆರಿಗೆ ಮಾಡಿಸಿ ಮಾನವೀಯತೆ ಮೆರೆದಿದ್ದಾರೆ.

ಅಶ್ವಿನಿ ಬಾಗೋಜಿ ಎಂಬ ಮಹಿಳೆಗೆ ಗಂಡು ಮಗು ಜನಿಸಿದ್ದು, ತಾಯಿ ಮತ್ತು ಮಗು ಅರೋಗ್ಯ ವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

108ಸಿಬ್ಬಂದಿಗಳಾದ ಜಂಗ್ಲಿಸಾಬ ಅತ್ತಾರ ಹಾಗೂ ಪರಮಾನಂದ ಅವರ ಕಾರ್ಯಕ್ಕೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಶ್ಲಾಗಿಸಿ ಅಭಿನಂದನೆಗಳು ಸಲ್ಲಿಸಿದ್ದಾರೆ.

Related Articles

Back to top button