CrimeKarnataka NewsLatest

*ಕೃಷಿಹೊಂಡದಲ್ಲಿ ಮುಳುಗಿ ತಂದೆ, ಇಬ್ಬರು ಮಕ್ಕಳು ಸಾವು*

ಪ್ರಗತಿವಾಹಿನಿ ಸುದ್ದಿ: ಮಕ್ಕಳಿಗೆ ಈಜಲು ಕಲಿಸುವಾಗ ಕೃಷಿ ಹೊಂಡದಲ್ಲಿ ಮುಳುಗಿ ತಂದೆ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

ಕೋಲಾರ ಜಿಲ್ಲೆಯ ಮಾಲೂರು ತಾಕೂಲಿನ ನಕ್ಕನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶ್ರೀನಿವಾಸ್ (41), ಮಕ್ಕಳಾದ ಚೇತನ್(13), ರಾಜೇಶ್ (8) ಮೃತ ದುರ್ದೈವಿಗಳು.

ಗ್ರಾಮದ ಈರಪ್ಪ ಎಂಬುವವರಿಗೆ ಸೇರಿದ ಕೃಷಿ ಹೊಂಡದಲ್ಲಿ ಮಕ್ಕಳಿಗೆ ಈಜು ಕಲಿಸಲು ಹೋದಾಗ ತಂದೆ ಶ್ರೀನಿವಾಸ್, ಇಬ್ಬರು ಮಕ್ಕಳಿಗೂ ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮಾಸ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button