*ಆತ ಇನ್ನೂ ಎಳಸು; ರಾಜಕೀಯ ಪ್ರಬುದ್ಧತೆಯೇ ಇಲ್ಲ; ಸಂಸದ ಪ್ರತಾಪ್ ಸಿಂಹ ವಿರುದ್ಧ ಸಿಎಂ ಕಿಡಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್-ಬಿಜೆಪಿ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ ಎಂಬ ಸಂಸದ ಪ್ರತಾಪ್ ಸಿಂಹ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹೊಂದಾಣಿಕೆ ರಾಜಕಾರಣ ಮಾಡುತ್ತಿರುವವರು ಯಾರು? ವಿಪಕ್ಷಗಳ ಜೊತೆ ನಾನು ರಾಜಕೀಯವಾಗಿ ಮಾತನಾಡಲ್ಲ ಎಂದು ಗರಂ ಆದರು.

Home add -Advt

ಈ ಬಗ್ಗೆ ತನಿಖೆ ಮಾಡಿಸಿ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ನಾ? ಪ್ರತಾಪ್ ಸಿಂಹ ಎಳಸು, ರಾಜಕೀಯ ಪ್ರಬುದ್ಧತೆಯೇ ಇಲ್ಲ. ಮೈಸೂರು-ಬೆಂಗಳೂರು ಹೈವೆ ಮಾಡಿಸಿದ್ದು ನಾನೇ ಎಂದು ಹೇಳ್ತಾರೆ ಎಂದು ವಾಗ್ದಾಳಿ ನಡೆಸಿದರು.


Related Articles

Back to top button