Film & Entertainment

*ನಟ ದರ್ಶನ್ ಗೆ ಜೈಲೂಟವೇ ಫಿಕ್ಸ್*

ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಜೈಲೂಟವೇ ಫಿಕ್ಸ್ ಆಗಿದೆ. ಮನೆಯೂಟ ವ್ಯವಸ್ಥೆಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ವಜಾಗೊಳಿಸಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್, ತನಗೆ ಜೈಲೂಟ ಒಗ್ಗೂಡುತ್ತಿಲ್ಲ. ಅಜೀರ್ಣ, ಅತಿಸಾರವಾಗುತ್ತಿದ್ದು, ಮನೆ ಊಟ ನೀಡಲು ಅವಕಾಶ ಕೊಡಬೇಕು ಎಂದು ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

Home add -Advt

ಮನೆಯೂಟ, ಬಟ್ಟೆ, ಹಾಸಿಗೆ, ಪುಸ್ತಕ ನೀಡುವಂತೆ ಕೋರಿ ನಟ ದರ್ಶನ್ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ದರ್ಶನ್ ಸಲ್ಲಿಸಿರುವ ಅರ್ಜಿ ವಜಾಗೊಳಿಸಿರುವ ನ್ಯಾಯಾಲಯ, ಮನೆಯೂಟ ವ್ಯವಸ್ಥೆಗೆ ಅವಕಾಶವಿಲ್ಲ ಎಂದು ತಿಳಿಸಿದೆ. ಕೊಲೆ ಆರೋಪಿಗಳಿಗೆ ಮನೆಯೂಟ, ಬಟ್ಟೆ, ಹಾಸಿಗೆ ನೀಡಲು ಅವಕಾಶವಿಲ್ಲ ಎಂದು ಕೋರ್ಟ್ ಆದೇಶ ಹೊರಡಿಸಿದೆ.

Related Articles

Back to top button