Latest

*ಪರಪ್ಪನ ಅಗ್ರಹಾರ ಜೈಲುಪಾಲಾದ ಪವಿತ್ರಾ ಗೌಡ: ವಿಚಾರಣಾಧೀನ ಕೈದಿ ನಂಬರ್ ವಿತರಣೆ*

ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೀಡಾಗಿ ಜೈಲು ಸೇರಿರುವ ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಈಗ ವಿಚರಣಾಧೀನ ಕೈದಿ. ಈ ಹಿನ್ನೆಲೆಯಲ್ಲಿ ಆಕೆಗೆ ಕೈದಿ ನಂಬರ್ ನೀಡಲಾಗಿದೆ.

Home add -Advt

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿ ವಿಸ್ತರಣೆಯಾಗಿದೆ. ಪವಿತ್ರಾ ಗೌಡ ಸೇರಿ ಹತ್ತು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ.

ಜೈಲು ಸೇರಿರುವ ಪವಿತ್ರಾ ಗೌಡಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಅಧಿಕಾರಿಗಳು ವಿಚಾರಣಾಧೀನ ಕೈದಿ ನಂಬರ್ 6024/2024 ನ್ನು ವಿತರಣೆ ಮಾಡಿದ್ದಾರೆ.


Related Articles

Back to top button