Belagavi NewsBelgaum NewsKannada NewsKarnataka NewsNational

*ಮುಂದಿನ 2 ದಿನ ಭಾರಿ ಮಳೆ: ಹಲವೆಡೆ ರೆಡ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಮುಂದಿನ 2 ದಿನ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆಯಿದೆ. 

ಕರಾವಳಿಯ ಮೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜೊತೆಗೆ ಬೆಳಗಾವಿಗೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.‌

Home add -Advt

ಇನ್ನು ಆಗಸ್ಟ್ 20 ರಂದು ಸಹ ಮಳೆ ಮುಂದುವರಿಯಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಂಡ್ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. 

ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಕೊಡಗು ಜಿಲ್ಲೆಗಳಿಗೆ ಸಹ ಅಲರ್ಟ್ ಘೋಷಿಸಲಾಗಿದೆ. 

ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ,ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಯಚೂರು, ಕೊಪ್ಪಳ, ಗದಗದಲ್ಲಿ ಕೂಡ ಉತ್ತಮ ಮಳೆಯಾಗಲಿದೆ.

ಆಗಸ್ಟ್ 21 ರಂದು ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಗದಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Related Articles

Back to top button