Latest

ಒಂದೇ ದಿನದಲ್ಲಿ 70 ಸಾವಿರ ಗಡಿ ತಲುಪಿದ ಸೋಂಕಿತರ ಸಂಖ್ಯೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಶರವೇಗದಲ್ಲಿ ಹೆಚ್ಚುತ್ತಿದ್ದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 69,652 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 28,36,926ಕ್ಕೆ ಏರಿಕೆಯಾಗಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಒಂದೇ ದಿನ 977 ಮಂದಿ ಬಲಿಯಾಗಿದ್ದು, ಇದರೊಂದಿಗೆ ದೇಶದಲ್ಲಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದವರ ಸಂಖ್ಯೆ 53,866ಕ್ಕೆ ಏರಿಕೆಯಾಗಿದೆ.

Home add -Advt

28,36,926 ಜನ ಸೋಂಕಿತರ ಪೈಕಿ 20,96,665 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. 6,86,395 ಸಕ್ರಿಯ ಪ್ರಕರಣಗಳಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದೇಶದಲ್ಲಿ ಕೊರೊನಾ ಸೋಂಕು ಕೊಂಚ ಇಳಿಮುಖವಾಗುತ್ತಿದೆ ಎನ್ನುತ್ತಿರುವಾಗಲೇ ಕಳೆದ 24 ಗಂತೆಯಲ್ಲಿ ಮತ್ತೆ ಸೋಂಕಿತರ ಸಂಖ್ಯೆ ಹೆಚ್ಚಿರುವುದು ಆತಂಕಕ್ಕೆ ಕಾರಣವಾಗಿದೆ.

Related Articles

Back to top button