
ಪ್ರಗತಿವಾಹಿನಿ ಸುದ್ದಿ: ಭಾರಿ ರೈಲು ದುರಂತವೊಂದು ಸ್ವಲ್ಪದರಲ್ಲಿ ತಪ್ಪಿದೆ. ಚಲಿಸುತ್ತಿದ್ದ ಪ್ಯಾಸೇಂಜರ್ ರೈಲಿನ 6 ಬೋಗಿಗಳು ಏಕಾಏಕಿ ಬೇರ್ಪಟ್ಟ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ತಾಳಗುಪ್ಪ-ಮೈಸೂರು ಎಕ್ಸ್ ಪ್ರೆಸ್ ರೈಲಿನ ಆರು ಬೋಗಿಗಳು ತಾಂತ್ರಿಕ ದೋಷದಿಂದ ಇದ್ದಕ್ಕಿದ್ದಂತೆ ಬೇರ್ಪಟ್ಟಿದ್ದು, ಶಿವಮೊಗ್ಗದ ಹೊಳೆ ಬಸ್ ನಿಲ್ದಾಣ ಬಳಿಯ ತುಂಗಾ ಸೇತುವೆ ಮೇಲೆ ಈ ಘಟನೆ ನಡೆದಿದೆ.
ರೈಲಿನ 21 ಬೋಗಿಗಳಲ್ಲಿ 6 ಬೋಗಿಗಳು ಏಕಾಏಕಿ ಬೇರ್ಪಟ್ಟಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಪ್ರಯಾಣಿಕರು, ರೈಲು ಸಿಬ್ಬಂದಿಗಳು ಸುರಕ್ಷಿತವಾಗಿದ್ದಾರೆ. ರೈಲ್ವೆ ಸಿಬಂದಿ 46 ನಿಮಿಷ ಕಾರ್ಯಾಚರಣೆ ನಡೆಸಿ ರೈಲು ಬೋಗಿಗಳನ್ನು ಜೋಡಿಸಿದ್ದಾರೆ.