Kannada NewsKarnataka NewsLatest
*ಬೆಳ್ಳಂ ಬೆಳಿಗ್ಗೆ IT ಅಧಿಕಾರಿಗಳ ದಾಳಿ*

ಪ್ರಗತಿವಾಹಿನಿ ಸುದ್ದಿ: ಬೆಳ್ಳಂ ಬೆಳಿಗ್ಗೆ ಬೆಂಗಳೂರಿನ 10ಕ್ಕೂ ಹೆಚ್ಚು ಕಡೆಗಳಲ್ಲಿ ಆದಾಯ ಇಲಾಖೆ ಅಧಿಕಾರಿಗಳು (ಐಟಿ) ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಮೇಘನಾ ಫುಡ್ಸ್ ಗ್ರೂಪ್ ಕಂಪನಿಗೆ ಸೇರಿದ ಹತ್ತಕ್ಕೂ ಹೆಚ್ಚು ಕಡೆಗಳಲ್ಲಿ ಐಟಿ ದಾಳಿ ನಡೆಸಲಾಗಿದೆ. ಮೇಘನಾ ಕಂಪನಿಗೆ ಸೇರಿದ ಹೋಟೆಲ್, ರೆಸ್ಟೋರೆಂಟ್ ಸೇರಿದಂತೆ ವಿವಿಧೆಡೆಗಳಲ್ಲಿ ದಾಳಿ ನಡೆಸಲಾಗಿದೆ.
ಕೋರಮಂಗಲ, ಇಂದಿರಾನಗರ, ಜಯನಗರದಲ್ಲಿರುವ ಮೇಘನಾ ಫುಡ್ಸ್ ಶಾಖೆಗಳ ಮೇಲೆ ಕರ್ನಾಟಕ ಹಾಗೂ ಗೋವಾ ವಿಭಾಗದ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ತೆರಿಗೆ ಪಾವತಿಯಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ.



