Kannada NewsKarnataka NewsLatest
ಮರಗಾಯಿ ದೇವಿಯ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಹಲಗಾ ಗ್ರಾಮದ ಶ್ರೀ ಮರಗಾಯಿ ದೇವಿಯ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾದ ಹರ್ಷ ಶುಗರ್ಸ್ ವ್ಯವಸ್ಥಾಪಕ ನಿರ್ದೇಶಕ ಚನ್ನರಾಜ ಹಟ್ಟಿಹೊಳಿ, ದೇವಿಯ ದರ್ಶನ ಪಡೆದು ಮಹಾಪ್ರಸಾದ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಮುತ್ನಾಳ ಕೇದಾರಪೀಠದ ಶಿವಾನಂದ ಶಿವಾಚಾರ್ಯ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಈ ಸಂದರ್ಭದಲ್ಲಿ ಗ್ರಾಮದ ಗುರು ಹಿರಿಯರು, ಗ್ರಾಮ ಪಂಚಾಯತಿಯ ಅಧ್ಯಕ್ಷ, ಉಪಾಧ್ಯಕ್ಷರು, ಸರ್ವಸದಸ್ಯರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಬ್ಯಾಂಕಿನ ಅಧ್ಯಕ್ಷ, ಉಪಾಧ್ಯಕ್ಷರು, ಸರ್ವ ಸದಸ್ಯರು, ಮರಗಾಯಿ ದೇವಸ್ಥಾನದ ಟ್ರಸ್ಟ್ ಕಮೀಟಿಯವರು, ಬಸನಗೌಡ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.




