*ದಾವರಣಗೆರೆ ಉಪ ಚುನಾವಣೆ: ಗೋ ಬ್ಯಾಕ್ ಕಾಂಗ್ರೆಸ್ ಎಂದು ಕೂಗಿದ ಮುಸ್ಲಿಮರು*

ಪ್ರಗತಿವಾಹಿನಿ ಸುದ್ದಿ: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾವು ದಿನದಿಂದ ದಿನಕ್ಕೆ ಗೆಚ್ಚಾಗುತ್ತಿದೆ. ಮುಸ್ಲಿಂರಿಗೆ ಟಿಕೆಟ್ ನೀಡಬೇಕು ಎಂಬ ಪಟ್ಟು ಹಿಡಿದಿದ್ದ ಮುಸ್ಲಿಂ ನಾಯಕರು ಸಿಎಂ ಸಿದ್ದರಾಮಯ್ಯ ಅವರ ಮಾತಿಗೆ ಬೆಲೆ ಕೊಟ್ಟು ಸುಮ್ಮನಾಗಿದ್ದರು. ಆದರೆ ಮತ್ತೆ ಇದೀಗ ಆಕ್ರೋಶ ಹೊರ ಹಾಕಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪ್ರಚಾರದ ವೇಳೆ ಮುಸ್ಲಿಮರು ‘ಗೋ ಬ್ಯಾಕ್’ ಎಂದು ಘೋಷಣೆ ಕೂಗಿದ್ದಾರೆ. ದಾವಣಗೆರೆಯ ಬಾಷಾ ನಗರ ಮುಸ್ಲಿಂ ರಸ್ತೆಯಲ್ಲಿ ಪ್ರಚಾರದ ಸಂದರ್ಭದಲ್ಲಿ ಘಟನೆ ನಡೆದಿದ್ದು, ಸಾವಿರಾರು ಮುಸ್ಲಿಮರು ‘ಗೋ ಬ್ಯಾಕ್, ಗೋ ಬ್ಯಾಕ್ ಕಾಂಗ್ರೆಸ್’ ಎಂದು ಘೋಷಣೆ ಕೂಗಿದ್ದಾರೆ.
ಮುಸ್ಲಿಂ ಸಮುದಾಯ ಕಾಂಗ್ರೆಸ್ ವಿರುದ್ಧ ಅಸಮಧಾನಗೊಂಡಿದ್ದು, ಕಾಂಗ್ರೆಸ್ ಪ್ರಚಾರದ ವೇಳೆ ‘ಗೋ ಬ್ಯಾಕ್ ಕಾಂಗ್ರೆಸ್’ ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಹಾಗೇ ಪ್ರಚಾರ ನಡೆಸುತ್ತಾ ಕಾರಿನಲ್ಲಿ ತೆರಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




