Latest

ರೈತರ 12,110 ಕೋಟಿ ರೂ ಸಾಲ ಮನ್ನಾ – ಸಿಎಂ ಘೋಷಣೆ

ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಸಹಕಾರಿ ಬ್ಯಾಂಕ್ ನಿಂದ ರೈತರು ಪಡೆದ ಸಾಲವನ್ನು ಮನ್ನಾ ಮಾಡುವುದಾಗಿ ತಮಿಳುನಾಡು ಸರ್ಕಾರ ಘೋಷಣೆ ಮಾಡಿದೆ. ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಸರ್ಕಾರದ ಈ ಘೋಷಣೆ ಮಹತ್ವ ಪಡೆದುಕೊಂಡಿದೆ.

ಈ ಕುರಿತು ವಿಧಾನಸಭೆಯಲ್ಲಿ ಮಾತನಾಡಿರುವ ತಮಿಳುನಾಡು ಸಿಎಂ ಪಳನಿಸ್ವಾಮಿ, ರೈತರ 12,110 ಕೋಟಿ ಸಾಲ ಮನ್ನಾ ಮಾಡುವುದಾಗಿ ತಿಳಿಸಿದ್ದಾರೆ. ಇದರಿಂದ 16.43 ಕೋಟಿ ರೈತರಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

ತಮಿಳುನಾಡು ವಿಧಾನಸಭಾ ಚುನಾವಣೆ ಸಮೀಸಿರುವ ಹಿನ್ನೆಲೆಯಲ್ಲಿ ಆಡಳಿತಾರೂಡ ಅಣ್ಣಾಡಿಎಂಕೆ ಹಾಗೂ ವಿಪಕ್ಷ ಡಿಎಂಕೆ ನಡುವೆ ತೀವ್ರ ಪೈಪೋಟಿ ಹೆಚ್ಚುತ್ತಿದ್ದು, ರೈತರ ಮನಗೆಲ್ಲಲು ರಾಜ್ಯ ಸರ್ಕಾರ ಸಾಲ ಮನ್ನಾ ಘೋಷಣೆ ಮಾಡಿದೆ ಎನ್ನಲಾಗುತ್ತಿದೆ.

Related Articles

Back to top button