Latest

ಮಹಿಳೆಯರಿಗೆ ಅಶ್ಲೀಲ ಫೋಟೋ ಕಳುಹಿಸಿ ಸಿಕ್ಕಿಬಿದ್ದ ಕಿರಾತಕ

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಮಹಿಳೆಯರಿಗೆ ಅಶ್ಲೀಲ ಫೋಟೋ ಕಳುಹಿಸಿ, ಮೆಸೇಜ್ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ಚಿತ್ರದುರ್ಗದ ಚಳ್ಳಕೆರೆಯಲ್ಲಿ ನಡೆದಿದೆ.

54 ವರ್ಷದ ರಾಮಕೃಷ್ಣ ಬಂಧಿತ ಆರೋಪಿ. ಬಂಧಿತ ಆರೋಪಿ 200ಕ್ಕೂ ಹೆಚ್ಚು ಮಹಿಳೆಯರಿಗೆ ಅಶ್ಲೀಲ ಫೋಟೋ ಕಳುಹಿಸಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ.

ಆರೋಪಿ ವಿರುದ್ಧ ಸಾರ್ವಜನಿಕರು ನೀಡಿದ್ದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದ ಚಳ್ಳಕೆರೆ ಪೊಲೀಸರು, ಮೊಬೈಲ್ ಟವರ್ ಲೊಕೇಶನ್ ಪತ್ತೆ ಹಚ್ಚಿ ಆರೋಪಿ ಬಂಧಿಸಿದ್ದಾರೆ.

Related Articles

Back to top button