Politics

*ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡಿ; ವೇದಿಕೆ ಮೇಲೆಯೇ ಸಿಎಂ ಗೆ ಸೂಚಿಸಿದ ಸ್ವಾಮೀಜಿ*

ಪ್ರಗತಿವಾಹಿನಿ ಸುದ್ದಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಸ್ವಾಮೀಜಿಯೊಬ್ಬರು ವೇದಿಕೆ ಮೇಲೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿದ ಪ್ರಸಂಗ ನಡೆದಿದೆ.

Home add -Advt

ಬೆಂಗಳೂರಿನಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ವಿಶ್ವ ಒಕ್ಕಲಿಗ ಮಹಾಸಂಸ್ಥಾನದ ಚಂದ್ರಶೇಖರ ಸ್ವಾಮೀಜಿ, ಹಲವರಿಗೆ ಮುಖ್ಯಮಂತ್ರಿಗಳಾಗುವ ಅವಕಾಶ ಸಿಕ್ಕಿದೆ. ಆದರೆ ಡಿ.ಕೆ.ಶಿವಕುಮಾರ್ ಅವರಿಗೆ ಆ ಅವಕಾಶ ಸಿಕ್ಕಿಲ್ಲ. ಹಾಗಾಗಿ ಸಿದ್ದರಾಮಯ್ಯನವರು ಡಿ.ಕೆ.ಶಿವಕುಮರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದರು.

ಸಿದ್ದರಾಮಯ್ಯನವರೇ ನಿಮಗೆ ಅನುಭವವಿದೆ. ಡಿ.ಕೆ.ಶಿವಕುಮಾರ್ ಅವರಿಗೂ ಸಿಎಂ ಆಗುವ ಅವಕಾಶ ನೀಡಿ, ನಿಮ್ಮ ಸ್ಥಾನ ಬಿಟ್ಟುಕೊಡಿ. ಸಿದ್ದರಾಮಯ್ಯ ಮನಸ್ಸು ಮಾಡಿದರೆ ಮಾತ್ರ ಇದು ಸಾಧ್ಯ. ಹಾಗಾಗಿ ದಯವಿಟ್ಟು ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಟ್ಟು ಅನುಗ್ರಹಿಸಿ ಎಂದು ಹೇಳಿದರು.

Related Articles

Back to top button