Latest

*ವಿಪಕ್ಷ ನಾಯಕ ಸಿದ್ದರಾಮಯ್ಯ ಅಣ್ಣನ ಮಕ್ಕಳ ವಿರುದ್ಧ ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ; ಮೈಸೂರು: ವಿಧಾನಸಭಾ ಚುನಾವಣೆಯ ಹೈ ವೋಲ್ಟೇಜ್ ಕ್ಷೇತ್ರ ಎಂದೇ ಬಿಂಬಿತವಾಗಿರುವ ವರುಣಾದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಬೆಂಬಲಿಗರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ ಅಣ್ಣನ ಮಕ್ಕಳ ವಿರುದ್ಧ ದೂರು ದಾಖಲಾಗಿದೆ.

ವರುಣ ಪೊಲೀಸ್ ಠಾಣೆಯಲ್ಲಿ ಕಾರ್ಯಕರ್ತ ನಾಗೇಶ್ ಅವರ ತಂದೆ ಚಂದ್ರಪ್ಪ ದೂರು ನೀಡಿದ್ದಾರೆ. ನಾಗೇಶ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಸಿದ್ದರಾಮಯ್ಯನವರ ಅಣ್ಣನ ಮಕ್ಕಳಿಂದ ಈ ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Home add -Advt

ನನ್ನ ಮಗ ಸೋಮಣ್ಣ ಅವರ ಜೊತೆ ಪ್ರಚಾರಕ್ಕೆ ಹೋಗಿದ್ದಾಗ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ನಾಗೇಶ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

https://pragati.taskdun.com/karnatakarain-alertimd/

Related Articles

Back to top button