Latest

ಸೋಂಕಿತರನ್ನು ಅಪರಾಧಿಗಳಂತೆ ಕಾಣಬೇಡಿ: ಸಂಸದೆ ಸುಮಲತಾ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಂಡ್ಯ ಸಂಸದೆ, ನಟಿ ಸುಮಲತಾ ಅಂಬರೀಶ್ ಗೆ ಕೊರೊನಾ ಪಾಸಿಟೀವ್ ಬಂದಿದ್ದು, ಈ ಹಿನ್ನಲೆಯಲ್ಲಿ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವ ಅವರು ಸಾಮಾಜಿಕ ಜಾಲತಾಣಗಳಲ್ಲಿ ಮನವಿಯೊಂದನ್ನು ಮಾಡಿದ್ದಾರೆ.

ಕೊರೊನಾ ಸೋಂಕಿತರನ್ನ ಅಪರಾಧಿಗಳಂತೆ ಕಾಣಬೇಡಿ. ಅವರನ್ನು ನಿಂದಿಸಬೇಡಿ. ಇದೊಂದು ರೀತಿಯ ಯುದ್ಧ ಎಲ್ಲರೂ ಒಟ್ಟಾಗಿ ಹೋರಾಡಬೇಕು ಎಂದು ಹೇಳಿದ್ದಾರೆ.

Home add -Advt

ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಸುಮಲತಾ ಅವರು ಕೊರೊನಾದಿಂದ ಗುಣಮುಖರಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು, ಈ ಬಗ್ಗೆಯೂ ಸ್ಪಷ್ಟನೆ ನೀಡಿರುವ ಸುಮಲತಾ, ನಾನು ಕೊರೊನಾದಿಂದ ಗುಣಮುಖ ಆಗಿದ್ದೇನೆ ಎನ್ನುವ ಒಂದು ಸುದ್ದಿ ಹರಿದಾಡುತ್ತಿದೆ. ಆದರೆ ನಾನು ಸಂಪೂರ್ಣವಾಗಿ ಗುಣಮುಖವಾಗಿರುವುದು, ಕ್ವಾರಂಟೈನ್ ಅವಧಿ ಮುಗಿದು, ಪರೀಕ್ಷೆಯ ಬಳಿಕವೇ ತಿಳಿಯುವುದು. ಸದ್ಯಕ್ಕೆ ಔಷಧಿ ಹಾಗೂ ಸುಶ್ರುಷೆ ಮುಂದುವರಿದಿದೆ. ನಾನು ಗುಣಮುಖ ಆಗಲೆಂದು ನೀವೆಲ್ಲರೂ ಮಾಡಿದ ಆಶೀರ್ವಾದ, ಹಾರೈಕೆಗಳಿಗೆ ಋಣಿ. ಇನ್ನು ಕೆಲವೇ ದಿನಗಳಲ್ಲಿ ಗುಣಮುಖ ಆಗುವ ಭರವಸೆ ಇದೆ ಎಂದಿದ್ದಾರೆ.

ಕೊರೊನಾ ಸೋಂಕಿತರನ್ನ ಅಪರಾಧಿಗಳ ರೀತಿ ಕಾಣುವುದು, ಸಮಾಜದ ನಿಂದನೆಗೆ ಗುರಿ ಮಾಡುವುದು ಸರಿಯಲ್ಲ. ಇದು ಒಂದು ಯುದ್ಧ, ಕೊರೊನಾ ವಿರುದ್ಧ ಎಲ್ಲರೂ ಒಟ್ಟಾಗಿ ಹೋರಾಡಬೇಕಿದೆ. ಮುಖ್ಯವಾಗಿ ಸೋಂಕಿತರು ಕ್ವಾರಂಟೈನ್ ಅವಧಿಯನ್ನು ಮತ್ತು ಸರ್ಕಾರದ ಎಲ್ಲಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅತ್ಯಗತ್ಯ ಹಾಗೂ ಅದು ನಮ್ಮ ಜವಾಬ್ದಾರಿ ಎಂದು ಸುಮಲತಾ ತಿಳಿಸಿದ್ದಾರೆ.

ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ತಪ್ಪದೆ ಮುಖಕ್ಕೆ ಮಾಸ್ಕ್ ಧರಿಸುವುದನ್ನ ಮರಿಯಬೇಡಿ ಎಂದು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

Related Articles

Back to top button