Karnataka NewsLatestPolitics

*ಶೃಂಗೇರಿ ಷಡ್ಯಂತ್ರ: ಕಾನೂನು ಹೋರಾಟ ಮಾಡುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಷಡ್ಯಂತ್ರ ಹಾಗೂ ವ್ಯವಸ್ಥಿತ ಅಪರಾಧ ನಡೆದಿದೆ. ಇದು ದೇಶ, ಪ್ರಜಾಪ್ರಭುತ್ವಕ್ಕೆ ಕಳಂಕ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಿಡಿಕಾರಿದರು.

ಬೆಂಗಳೂರಿನ ಸದಾಶಿವನಗರ ನಿವಾಸ ಹಾಗೂ ಹೊಸಪೇಟೆಯಲ್ಲಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು.

Home add -Advt

“ಈ ರೀತಿಯೂ ಮಾಡುತ್ತಾರೆ ಎಂದು ಊಹೆ ಮಾಡಿರಲಿಲ್ಲ. ಮಾಜಿ ಶಾಸಕ ಜೀವರಾಜ್ ಅವರು ಅಧಿಕಾರಿಗಳ ದುರ್ಬಳಕೆ ಮಾಡಿಕೊಂಡು ಅಂಚೆ ಮತಗಳಲ್ಲಿ ಅಕ್ರಮ ಮಾಡಿದ್ದಾರೆ ಎಂದು ವರದಿಯಾಗಿದೆ. ನಮ್ಮ ಸ್ಥಳೀಯ ಅಭ್ಯರ್ಥಿಗಳು, ಎಜೆಂಟರು ದೂರು ನೀಡಿದ್ದರು. ಚುನಾವಣೆ ಮತ ಎಣಿಕೆ ಬಳಿಕ ನಮ್ಮ ಎಜೆಂಟರು ಅವರ ಎಜೆಂಟರು ಹಾಗೂ ಅಧಿಕಾರಿಗಳು ಸಹಿ ಹಾಕಿದ್ದಾರೆ. ಇದಾದ ಬಳಿಕ ಈ ರೀತಿ ನಡೆಸಿದ್ದಾರೆ” ಎಂದರು.

ಕಾನೂನು ಹೋರಾಟ ಮಾಡುತ್ತೇವೆ

“ಎಲ್ಲಾ ರಾಜಕೀಯ ಪಕ್ಷಗಳು ಈ ವಿಚಾರದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು. ನಮ್ಮ ಅಭ್ಯರ್ಥಿಗೆ ಬಂದ ಅಂಚೆ ಮತಗಳನ್ನು ತಿದ್ದಿ ಅವುಗಳನ್ನು ಅಸಿಂಧುಗೊಳಿಸಲು ಷಡ್ಯಂತ್ರ ಮಾಡಲಾಗಿತ್ತು. ಈ ವಿಚಾರವಾಗಿ ದೊಡ್ಡ ತನಿಖೆ ಆಗಬೇಕು. ಕಾನೂನು ಹಾಗೂ ನ್ಯಾಯಾಲಯದಲ್ಲಿ ಇರುವ ಅವಕಾಶದಲ್ಲಿ ಹೋರಾಟ ಮಾಡಲಾಗುವುದು. ಜಯನಗರ ಕ್ಷೇತ್ರದಲ್ಲೂ ಇದೇ ರೀತಿ ಅನ್ಯಾಯ ಮಾಡಲಾಗಿದೆ. ನಾವು ಕಾನೂನು ಹೋರಾಟ ಮಾಡುತ್ತೇವೆ” ಎಂದು ತಿಳಿಸಿದರು.

Related Articles

Back to top button