Latest

ಬಿಜೆಪಿಯ ಇಬ್ಬರಿಗೆ ನೋಟಿಸ್

 ಪ್ರಗತಿವಾಹಿನಿ ಸುದ್ದಿ, ಖಾನಾಪುರ:

ಕಳೆದ ಮೇ.೧೫ರಂದು ಪಟ್ಟಣದಲ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕರು ಆಯೋಜಿಸಿದ್ದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಪಕ್ಷದ ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪದಡಿ ಬಿಜೆಪಿ ಖಾನಾಪುರ ಬ್ಲಾಕ್ ಅಧ್ಯಕ್ಷ ವಿಠ್ಠಲ ಪಾಟೀಲ ಪಕ್ಷದ ಯುವ ಮೋರ್ಚಾ ಕಾರ್ಯದರ್ಶಿ ಸುನೀಲ ನಾಯ್ಕ ಮತ್ತು ಶಹರ ಘಟಕದ ಅಧ್ಯಕ್ಷ ರಾಜೇಂದ್ರ ರಾಯ್ಕಾ ಅವರಿಗೆ ಸೋಮವಾರ ಕಾರಣ ಕೇಳಿ ನೋಟಿಸ್ ಹೊರಡಿಸಿದ್ದಾರೆ.
ಜವಾಬ್ದಾರಿ ಹುದ್ದೆಯಲ್ಲಿರುವ ಇಬ್ಬರೂ ಮುಖಂಡರು ಪಕ್ಷದ ಮುಖಂಡರ ಗಮನಕ್ಕೆ ತರದೇ ವಿರೋಧಿ ಪಕ್ಷದವರ ವಿಜಯೋತ್ಸವದಲ್ಲಿ ಭಾಗಿಯಾಗಿ ಪಕ್ಷಕ್ಕೆ ಮುಜುಗರ ತರುವ ರೀತಿಯಲ್ಲಿ ವರ್ತಿಸಿದ್ದು, ಇದಕ್ಕೆ ಸಮರ್ಪಕ ಉತ್ತರ ನೀಡುವಂತೆ ಮತ್ತು ಇದಕ್ಕೆ ತಪ್ಪಿದಲ್ಲಿ ಪಕ್ಷದ ವರಿಷ್ಠರ ತೀರ್ಮಾನದಂತೆ ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ ಎಂದು ಪಕ್ಷದ ಅಧ್ಯಕ್ಷರು ನೋಟಿಸಿನಲ್ಲಿ ತಿಳಿಸಿದ್ದಾರೆ.

Home add -Advt

Related Articles

Back to top button